ಕಡಬ: ಕಾಣಿಯೂರು ರೈಲು ಮಾರ್ಗದ ಮಧ್ಯೆಯಿರುವ ಸವಣೂರು ರೈಲ್ವೆ ಗೇಟ್ ಬಳಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸವಣೂರು ರೈಲ್ವೆ ಗೇಟ್ ಬಳಿ ಯುವಕನ ಶವ ಪತ್ತೆ - youth deadBody found near Savannur Railway Gate
ಸವಣೂರು ರೈಲ್ವೆ ಗೇಟ್ ಬಳಿ ಯುವಕನೋರ್ವನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Savannur Railway Gate
ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಯುವಕ ಯಾರು?, ಎಲ್ಲಿಯವನು? ಎಂಬ ಮಾಹಿತಿ ಲಭ್ಯವಾಗಿಲ್ಲ.
ಈ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.