ಉಳ್ಳಾಲ:ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Netravati bridge
ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Road accident
ಹರೇಕಳ ನಿವಾಸಿ ಹಮೀದ್ ಎಂಬುವವರ ಪುತ್ರ ಶಬೀರ್ (24) ಸಾವನ್ನಪ್ಪಿರುವ ಬೈಕ್ ಸವಾರ. ಈತ ಮಂಗಳೂರಿನಿಂದ ಹರೇಕಳದ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಬ್ಬೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ನಾಗುರಿ ಸಂಚಾರಿ ಠಾಣಾ ಪೊಲೀಸರು ಡಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.