ಕರ್ನಾಟಕ

karnataka

ETV Bharat / state

ಸರ್ಕಾರಿ ಕಚೇರಿಯಲ್ಲಿ ರಜೆ ದಿನ ಯುವಕ-ಯುವತಿ: ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು - D.K Commissioner

ಮಂಗಳೂರಿನ ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಯುವಕ-ಯುವತಿ ಇದ್ದಿದ್ದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಧಾನಪರಿಷತ್ ಸದಸ್ಯ ಬಿ.ಎಂ ಫಾರೂಕ್ ಕಚೇರಿ
ವಿಧಾನಪರಿಷತ್ ಸದಸ್ಯ ಬಿ.ಎಂ ಫಾರೂಕ್ ಕಚೇರಿ

By

Published : Sep 7, 2020, 8:00 AM IST

ಮಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರ ಮಂಗಳೂರಿನ ಸರ್ಕಾರಿ ಕಚೇರಿಯಲ್ಲಿ ಭಾನುವಾರ ಜೋಡಿಯೊಂದು ಗುಪ್ತ್ ಗುಪ್ತ್ ಚರ್ಚೆಯಲ್ಲಿ ತೊಡಗಿದ್ದು, ಪೊಲೀಸರು ಮಧ್ಯಪ್ರವೇಶ ಮಾಡಿದ ಘಟನೆ ನಡೆದಿದೆ.

ದ.ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರ ಕಚೇರಿಯಲ್ಲಿ ಭನುವಾರ ಬೆಳಗ್ಗೆ 11 ಗಂಟೆ ವೇಳೆಗೆ ಯುವಕ-ಯುವತಿ ಇದ್ದದ್ದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿತ್ತು. ಅದರಲ್ಲಿಯೂ ಕಚೇರಿ ಬಾಗಿಲು ಹಾಕಿ ಯುವಕ ಮತ್ತು ಯುವತಿ ಒಳಗಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ವಿಚಾರಣೆ ನಡೆಸಿದಾಗ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಯುವತಿಯೊಬ್ಬಳು ಇರುವುದು ತಿಳಿದು ಬಂದಿದೆ. ಮಹಿಳಾ ಪೊಲೀಸ್ ಠಾಣೆಗೆ ಇಬ್ಬರನ್ನೂ ಕರೆದುಕೊಂಡು ಹೋದ ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details