ಬೆಳ್ತಂಗಡಿ(ದಕ್ಷಿಣ ಕನ್ನಡ): ನಾನು ಕಾಂಗ್ರೆಸ್ ಸೇರುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನನ್ನ ಕ್ಷೇತ್ರದ ಜನತೆಯ ಅಭಿಪ್ರಾಯ, ಅಭಿಮಾನಿಗಳ ಒತ್ತಡದಿಂದಾಗಿ ಪಕ್ಷ ಸೇರುವ ಬಗ್ಗೆ ತೀರ್ಮಾನಿಸಿದ್ದೇನೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ದಿನ ನಿಗದಿಗೊಳಿಸುವ ಬಗ್ಗೆ ತಿಳಿಸಿದ್ದಾರೆ ಎಂದು ವೈಎಸ್‌ವಿ ದತ್ತ ಹೇಳಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹರಿದಾಡುತ್ತಿದ್ದ ಉಹಾಪೋಹಗಳಿಗೆ ತೆರೆ ಎಳೆದರು.
ಕಾಂಗ್ರೆಸ್ ಸೇರುವುದು ಖಚಿತ: ಊಹಾಪೋಹಗಳಿಗೆ ತೆರೆ ಎಳೆದ ದತ್ತ - ಈಟಿವಿ ಭಾರತ ಕನ್ನಡ
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ವೈಎಸ್‌ವಿ ದತ್ತ ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರ ಜೀವನಾಧಾರಿತ 'ವಸಂತ ವಿನ್ಯಾಸ' ಪುಸ್ತಕ ಅನಾವರಣ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ವೈಎಸ್‌ವಿ ದತ್ತ
ಕಾಂಗ್ರೆಸ್ ಸೇರುವುದು ಖಚಿತ ಎಂದ ದತ್ತ
Last Updated : Dec 18, 2022, 9:34 AM IST