ನೆಲ್ಯಾಡಿ(ದಕ್ಷಿಣ ಕನ್ನಡ): 40 ದಿನದ ನವಜಾತ ಶಿಶುವೊಂದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದನ್ನು ತುರ್ತು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆ್ಯಂಬುಲೆನ್ಸ್ನಲ್ಲಿ ಇಂದು ಮಧ್ಯಾಹ್ನ 12ಕ್ಕೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಕರೆದೊಯ್ಯಲಾಗಿದೆ.
ಹೃದ್ರೋಗ ಇರುವ ನವಜಾತ ಶಿಶು ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ರವಾನೆ - new born baby sent to Bengaluru Jayadeva hospital
ನವಜಾತ ಶಿಶುವೊಂದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದನ್ನು ತುರ್ತು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆ್ಯಂಬುಲೆನ್ಸ್ ಮೂಲಕ ಇಂದು ಮಧ್ಯಾಹ್ನ 12ಕ್ಕೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಕರೆದೊಯ್ಯಲಾಗಿದೆ.
ಝೀರೋ ಟ್ರಾಫಿಕ್..... 40 ದಿನದ ಹೃದ್ರೋಗ ಮಗು ಬೆಂಗಳೂರಿಗೆ!
ಈವರೆಗೆ ಶಿಶು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಮಂಗಳೂರಿಂದ ಹೊರಟ ವಾಹನ ಉಪ್ಪಿನಂಗಡಿಯಿಂದ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಹಾಸನ ಕಡೆ ತೆರಳಿತು. ಈ ವೇಳೆ ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ ಕಡೆಗಳಲ್ಲಿ ಪೊಲೀಸರು, ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ ನೆರವಿನೊಂದಿಗೆ ಸಂಚಾರ ಸುಗಮಗೊಳಿಸಿ ಆ್ಯಂಬುಲೆನ್ಸ್ ತೆರಳಲು ಅನುವು ಮಾಡಿಕೊಡಲಾಗಿದೆ. ಇದಕ್ಕೆ ಸಾರ್ವಜನಿಕರೂ ಸಹ ಸಹಕಾರ ನೀಡಿದ್ದಾರೆ.
Last Updated : Feb 6, 2020, 3:57 PM IST