ಪುತ್ತೂರು(ದಕ್ಷಿಣ ಕನ್ನಡ):ಗ್ರಾಮ ಪಂಚಾಯಿತಿ ಲೆಕ್ಕ ಪತ್ರಗಳ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ, ಶಿಷ್ಟಾಚಾರ ಪಾಲಿಸದೇ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿರಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಅಮಾನತುಗೊಂಡವರು. ಪಿಡಿಒ ನಡೆಸಿರುವ ಅವ್ಯವಹಾರಗಳ ಸಂಬಂಧ ಗ್ರಾಮಸ್ಥರು ಸೇರಿದಂತೆ ಹಲವರು ದೂರುಗಳು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ರಚಿಸಲಾಗಿತ್ತು. ತನಿಖಾ ತಂಡವು ದೂರುಗಳಲ್ಲಿನ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಈ ತನಿಖಾ ವರದಿಯಲ್ಲಿ ಪಿಡಿಒ ಕರ್ತವ್ಯಲೋಪ ಎಸಗಿರುವುದು ಕಂಡುಬಂದ ಕಾರಣ ಅಮಾನತುಗೊಳಿಸಲಾಗಿದೆ.