ದಾವಣಗೆರೆ: ಜಿಲ್ಲೆಯಲ್ಲಿ 194 ಜನರು ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 17,184 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಈ ದಿನ ಜಿಲ್ಲೆಯಲ್ಲಿ 82 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 18,756 ಕ್ಕೆ ಏರಿಕೆಯಾಗಿದೆ. ದಾವಣಗೆರೆ 29, ಹರಿಹರ 17, ಜಗಳೂರು 5, ಚನ್ನಗಿರಿ 13, ಹೊನ್ನಾಳಿ 16 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಇರುವುದು ಖಚಿತವಾಗಿದೆ.