ದಾವಣಗೆರೆ : ಎಂ. ಸ್ಯಾಂಡ್ ಟಿಪ್ಪರ್ ಲಾರಿ ಹರಿದು ಪುಟ್ಟ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. ಕುಂದುವಾಡ ಗ್ರಾಮದ ನಿವಾಸಿ ಗಣೇಶ್ ಎಂಬವರ ಪುತ್ರಿ ಚರಸ್ವಿ (2 ವರ್ಷ 6 ತಿಂಗಳು) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಮನೆಗೆ ಬರುತ್ತಿದ್ದಾಗ ಬಾಲಕಿ ಮೈಮೇಲೆ ಟಿಪ್ಪರ್ ಲಾರಿ ಹರಿದಿದೆ. ಇದರಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. KA 17 D 5017 ನೋಂದಣಿಯ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ರಸ್ತೆ ತಡೆದು ಪ್ರತಿಭಟನೆ :ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರುರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಒತ್ತಾಯಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಹಾಗು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :Haveri Theft Case: ಮೊದಲು ಲಾರಿ ಕದ್ರು.. ಬಳಿಕ 87 ಲಕ್ಷ ರೂ. ಮೌಲ್ಯದ ಗುಟ್ಕಾ ಕದ್ದೊಯ್ದಿದ್ದ ನಾಲ್ವರು ಆರೋಪಿಗಳು ಅಂದರ್
ಗೂಡ್ಸ್ ವಾಹನಕ್ಕೆ ಸಿಲುಕಿ ಬಾಲಕಿ ಬಲಿ :ಹಾಲಿನ ವಾಹನದ ಚಕ್ರಕ್ಕೆ ಸಿಲುಕಿ ಬಾಲಕಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಹೊಸೂರು ಗ್ರಾಮದ ಸರ್ವಖಾನ್ ಎಂಬವರ ಪುತ್ರಿ ರಿಫಾ (3 ವರ್ಷ) ಅಪಘಾತದಲ್ಲಿ ಮೃತಪಟ್ಟಿದ್ದಳು. ಬೆಳಗ್ಗೆ ಹಾಲು ತೆಗೆದುಕೊಂಡು ಹೋಗುವ ವಾಹನವು ಹಿಂದಕ್ಕೆ ಚಲಿಸಿದ್ದರಿಂದ, ಅಲ್ಲಿಯೇ ಇದ್ದ ಬಾಲಕಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ಸೈಕಲ್ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಸಾರಿಗೆ ಬಸ್ ಡಿಕ್ಕಿ: ಕಳೆದ ಜೂನ್ 15ರಂದು ಸೈಕಲ್ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯಲ್ಲಿ ನಡೆದಿತ್ತು. ಮಳವಳ್ಳಿಯ ವಿನುಶ್ ಗೌಡ(10) ಅಪಘಾತದಲ್ಲಿ ಮೃತಪಟ್ಟಿದ್ದನು. ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ದೂರಲಾಗಿತ್ತು. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ :Mandya Accident: ಮಂಡ್ಯದ ಗೆಜ್ಜನಗೆರೆ ಬಳಿ ಕಾರುಗಳ ನಡುವೆ ಅಪಘಾತ; ಸ್ಥಳದಲ್ಲೇ ಮೂವರು ಸಾವು