ದಾವಣಗೆರೆ: ಜಿಲ್ಲೆಯಲ್ಲಿ 238 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,538ಕ್ಕೇರಿದೆ.
ದಾವಣಗೆರೆ ಜಿಲ್ಲೆಯಲ್ಲಿ 238 ಕೊರೊನಾ ಪ್ರಕರಣಗಳು ದೃಢ: ಸೋಂಕಿತರ ಸಂಖ್ಯೆ 17,538ಕ್ಕೇರಿಕೆ
ದಾವಣಗೆರೆ ಜಿಲ್ಲೆಯಲ್ಲಿ 238 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ.
ದಾವಣಗೆರೆ
ದಾವಣಗೆರೆ 76, ಹರಿಹರ 53, ಜಗಳೂರು 38, ಚನ್ನಗಿರಿ 42, ಹೊನ್ನಾಳಿ 28 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಒಬ್ಬರಲ್ಲಿ ಸೋಂಕು ಇರುವುದು ಖಚಿತವಾಗಿದೆ. 86 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ 15,476 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಪ್ರಸ್ತುತ 1,818 ಸಕ್ರಿಯ ಪ್ರಕರಣಗಳಿದ್ದು ಚಿಕಿತ್ಸೆ ಮುಂದುವರೆದಿದೆ. 1,545 ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, 6,668 ಸ್ವ್ಯಾಬ್ಗಳ ರಿಪೋರ್ಟ್ಗೆ ಜಿಲ್ಲಾಡಳಿತ ಕಾಯುತ್ತಿದೆ.