ದಾವಣಗೆರೆ:ಜಿಲ್ಲೆಯಲ್ಲಿ ಇಂದು 257 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14,097 ಕ್ಕೇರಿದೆ.
ದಾವಣಗೆರೆಯಲ್ಲಿ ಹೊಸದಾಗಿ 257 ಜನರಿಗೆ ಕೊರೊನಾ ಪಾಸಿಟಿವ್! - ದಾವಣಗೆರೆಯಲ್ಲಿ ಹೊಸದಾಗಿ 257 ಜನರಿಗೆ ಕೊರೊನಾ ಪಾಸಿಟಿವ್
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 14,097 ಕ್ಕೇರಿದೆ. ಈವರೆಗೆ 228 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಕೊರೊನಾ
ಸದ್ಯ 3,136 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ ಏಳು ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೋಗಿಗಳ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಈವರೆಗೆ 228 ಜನರು ಕೊರೊನಾಗೆ ಬಲಿಯಾಗಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯಕೀಯ ಸಿಬ್ಬಂದಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ಮೀಡಿಯಾ ಹೆಲ್ತ್ ಬುಲೆಟಿನ್ ವೇಳೆ ತಿಳಿಸಿದ್ದಾರೆ.