ದಾವಣಗೆರೆ : ಕೊರೊನಾ ಸೋಂಕು ಹಳ್ಳಿಗಳಿಗೆ ಹೆಚ್ಚು ಹಬ್ಬುತ್ತಿದೆ. ಒಂದೇ ಗ್ರಾಮದಲ್ಲಿ ಒಂದೇ ದಿನಕ್ಕೆ 28 ಪಾಸಿಟಿವ್ ಕೇಸ್ ಪತ್ತೆಯಾಗಿವೆ.
ದಾವಣಗೆರೆ ತಾಲೂಕಿನ ಜರೀಕಟ್ಟೆ ಗ್ರಾಮದಲ್ಲಿ ಸೋಂಕು ಹೆಚ್ಚಾಗಿದೆ. ಕಳೆದ ಒಂದೇ ದಿನದಲ್ಲಿ 28 ಕೊರೊನಾ ಪ್ರಕರಣ ಬೆಳಕಿಗೆ ಬಂದಿವೆ. ಆರೋಗ್ಯ ಇಲಾಖೆ 94 ಜನರ ಗಂಟಲು ದ್ರವ ಸಂಗ್ರಹಿಸಿತ್ತು. 94 ಜನರ ಪೈಕಿ 28 ಜನರಿಗೆ ಸೋಂಕು ಇರುವುದು ದೃಢವಾಗಿದೆ.