ಹರಿಹರ: ರಸ್ತೆಯಲ್ಲಿ ಯಾರಿಗಾದರೂ ಅಪಘಾತವಾದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ನಮಗೆ ಸಂಬಂಧವಿಲ್ಲ ಎಂಬಂತೆ ನಿಂತುಕೊಳ್ಳದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸೌಜನ್ಯತೆ ತೋರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈ.ಕೆ.ಬೇನಾಳ ಹೇಳಿದರು.
ಹರಿಹರದಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ - 31 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ರಸ್ತೆಯಲ್ಲಿ ಯಾರಿಗಾದರೂ ಅಪಘಾತವಾದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ನಮಗೆ ಸಂಬಂಧವಿಲ್ಲ ಎಂಬಂತೆ ನಿಂತುಕೊಳ್ಳದೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸೌಜನ್ಯತೆ ತೋರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈ.ಕೆ.ಬೇನಾಳ ಹೇಳಿದರು.
ನಗರದ ಕೆಎಸ್ಆರ್ಟಿಸಿ ಬಸ್ ಘಟಕದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹರಿಹರ ಇವರ ಸಂಯುಕ್ತಾಶ್ರಯದಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ, ಯುವಕರ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆಯ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಾಲಕರು ವಾಹನ ಚಾಲನೆ ಮಾಡುವಾಗ ಹಿಂದೆ ಮುಂದೆ, ಅಕ್ಕ-ಪಕ್ಕ ನೋಡಿಕೊಂಡು ಚಾಲನೆ ಮಾಡಬೇಕು. ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಿ ರಸ್ತೆ ಸುರಕ್ಷತೆ ಬಗ್ಗೆ ಗಮನದಲ್ಲಿಟ್ಟುಕೊಂಡು ಚಾಲನೆ ಮಾಡಬೇಕು. ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಕಾನೂನಿನ ಅಡಿಯಲ್ಲಿ ಜೀವಿಸಬೇಕು. ಚಾಲಕರ ನಿರ್ಲಕ್ಷ್ಯತನದಿಂದ ಅಪಘಾತವಾದರೆ ಹೆಚ್ಚಿನ ಮೊತ್ತದ ಪರಿಹಾರ ಕೊಡಲಾಗುತ್ತದೆ. ಒಂದು ವೇಳೆ ಹಣ ಕೊಡುವಲ್ಲಿ ವಿಳಂಬ ಅಥವಾ ಕಾನೂನಿನ ಆದೇಶವನ್ನು ನಿರ್ಲಕ್ಷಿಸಿದರೆ ಸಾರಿಗೆ ಸಂಸ್ಥೆಯ ವಾಹನವನ್ನು ಜಪ್ತಿ ಮಾಡಲಾಗುತ್ತದೆ. ಇದರಿಂದ ಸಾರಿಗೆ ಸಂಸ್ಥೆ ನಷ್ಟ ಅನುಭವಿಸಬೇಕಾಗುತ್ತದೆ ಎಂದರು.