ದಾವಣಗೆರೆ :ಜಿಲ್ಲೆಯಲ್ಲಿ 373 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9230ಕ್ಕೇರಿದೆ.
ಇಂದು 373 ಮಂದಿಗೆ ಕೊರೊನಾ - Davanagere corona updates
ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ 168 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 6632 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ 2413 ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ಮುಂದುವರಿದಿದೆ..
ಮೃತರ ಮಾಹಿತಿ :39 ವರ್ಷದ ಪುರುಷ, 55 ವರ್ಷದ ಮಹಿಳೆ, 60 ವರ್ಷದ ವೃದ್ಧ ಹಾಗೂ 51 ವರ್ಷದ ಪುರುಷ ತೀವ್ರ ಉಸಿರಾಟ, ಜ್ವರದಿಂದ ಬಳಲುತ್ತಿದ್ದರು. ಇವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ.
ಗುಣಮುಖ :ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ 168 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 6632 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ 2413 ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ಮುಂದುವರಿದಿದೆ. ಜಿಲ್ಲೆಯಲ್ಲಿ ಏಳು ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ.