ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ 45 ಕೊರೊನಾ ಪಾಸಿಟಿವ್: ಓರ್ವ ಸಾವು

ದಾವಣಗೆರೆ ಜಿಲ್ಲೆಯಲ್ಲಿ 581 ಕೊರೊನಾ ಸೋಂಕಿತರಿದ್ದು, 121 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಮುಕ್ತರಾಗಿ 21 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ ಒಟ್ಟು 431 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

45-new-corona-positive-cases-in-davanagere
ಕೊರೊನಾ

By

Published : Jul 14, 2020, 3:52 AM IST

ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ 45 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಸೋಂಕಿಗೆ ಓರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ 21ಕ್ಕೇರಿದೆ.

ದಾವಣಗೆರೆ ನಗರದ ಬೇತೂರು ರಸ್ತೆಯ 39 ವರ್ಷದ ವ್ಯಕ್ತಿ ತೀವ್ರ ಉಸಿರಾಟ ಹಾಗೂ ಜ್ವರದ ಹಿನ್ನೆಲೆಯಲ್ಲಿ ಜುಲೈ 6ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಕೊರೊನಾ ಇರುವುದು ಪತ್ತೆಯಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಒಟ್ಟು 581 ಕೊರೊನಾ ಸೋಂಕಿತರು ಜಿಲ್ಲೆಯಲ್ಲಿದ್ದು, 121 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ ಮುಕ್ತರಾಗಿ 21 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ ಒಟ್ಟು 431 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಐಎಲ್ಐ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸುಮಾರು 26ಕ್ಕೂ ಹೆಚ್ಚು ಮಂದಿಯಲ್ಲಿ‌ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಉಳಿದಂತೆ ಸೋಂಕು ಹೇಗೆ ತಗುಲಿತು ಎಂಬ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ.

ಜಗಳೂರಿನಲ್ಲಿ ಹೆಚ್ಚು ಕೇಸ್ ಪತ್ತೆಯಾಗಿದ್ದು, ದಾವಣಗೆರೆ, ಹೊನ್ನಾಳಿ, ಹರಿಹರ, ನ್ಯಾಮತಿಯಲ್ಲಿಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಮಹಿಳೆಯರು, ವೃದ್ಧರು, ಪುರುಷರು, ಯುವಕ ಹಾಗೂ ಯುವತಿಯರಿಗೂ ಸೋಂಕು ತಗುಲಿದೆ.

ABOUT THE AUTHOR

...view details