ದಾವಣಗೆರೆ: ಜಿಲ್ಲೆಯಲ್ಲಿ 484 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 9,971 ಜನರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ತಾಲೂಕುವಾರು ಬಿಡುಗಡೆ ಆದವರು:
ದಾವಣಗೆರೆಯಲ್ಲಿ 484 ಮಂದಿ ಕೊರೊನಾದಿಂದ ಗುಣಮುಖ - Davanagere corona updates
ದಾವಣಗೆರೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.
ದಾವಣಗೆರೆ
ದಾವಣಗೆರೆ 240, ಹರಿಹರ 71, ಜಗಳೂರು 19, ಚನ್ನಗಿರಿ 46, ಹೊನ್ನಾಳಿ 83 ಹಾಗೂ ಹೊರ ಜಿಲ್ಲೆಯಿಂದ ಬಂದ 25 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಇಂದು ಜಿಲ್ಲೆಯಲ್ಲಿ 267 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದುವರೆಗೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,753 ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 225 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2,557 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.