ದಾವಣಗೆರೆ: ಡಿಸಿಎಂ ಸ್ಥಾನ ತೆಗೆಯುವುದಾದರೆ ನಮ್ಮ ಅಭ್ಯಂತರವೇನಿಲ್ಲ. ಒಂದು ವೇಳೆ ನೀಡುವುದಾದರೆ ನಮ್ಮ ಸಮಾಜಕ್ಕೆ ನೀಡಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಪೀಠಾಧಿಪತಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಎಸ್ ಟಿ ಸಮುದಾಯಕ್ಕೆ ಶೇಕಡಾ 7.5 ಮೀಸಲಾತಿ ನೀಡಬೇಕು : ವಾಲ್ಮೀಕಿ ಶ್ರೀ - ಪ್ರಸನ್ನಾಂದಪುರಿ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಪೀಠಾಧಿಪತಿ
ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪೂರ್ವ ಸಿದ್ಧತಾ ಸಭೆ ನಂತರ ಪ್ರತಿಕ್ರಿಯೆ ನೀಡಿದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಎಸ್ ಟಿ ಸಮುದಾಯಕ್ಕೆ ಶೇಕಡಾ 7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪೂರ್ವ ಸಿದ್ಧತಾ ಸಭೆ ನಂತರ ಪ್ರತಿಕ್ರಿಯೆ ನೀಡಿದ ಅವರು, ಎಸ್ ಟಿ ಸಮುದಾಯಕ್ಕೆ ಶೇಕಡಾ 7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಸಿಎಂ ಅವರು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ಅಚಲವಾದ ನಂಬಿಕೆ ನಮಗಿದೆ ಎಂದರು.
ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಆಯೋಗ ರಚನೆಯಾಗಿತ್ತು. ಆದ್ರೆ, ಬಿಜೆಪಿ ಸರ್ಕಾರ ಬಂದಾಗ ಆಯೋಗ ಕಾರ್ಯ ಮಾಡುತ್ತಿದೆ. ನಮ್ಮ ನಿಯೋಗ ನಾಗಮೋಹನ್ ದಾಸ್ ರವರನ್ನು ಭೇಟಿ ಮಾಡಿದ್ದು, ವಾಲ್ಮೀಕಿ ಜಾತ್ರೆ ನಂತರವಾದರೂ ನಮಗೆ ಮೀಸಲಾತಿ ನೀಡುತ್ತಾರೆ ಎನ್ನುವ ನಂಬಿಕೆ ಇದೆ. ವರದಿ ಬರುವುದು ತುಂಬಾ ವಿಳಂಬವಾದ್ರೆ ಸಭೆ ನಡೆಸಿ ನಂತರದ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
TAGGED:
valmiki fair at Davanagere