ಕರ್ನಾಟಕ

karnataka

ETV Bharat / state

ಹೊನ್ನಾಳಿಯಲ್ಲಿ ಮನೆಗೆ ನುಗ್ಗಿ 80ರ ವೃದ್ಧೆ ಮೇಲೆ ಕಾಮುಕನಿಂದ ಅತ್ಯಾಚಾರ - ವೃದ್ಧೆ ಮೇಲೆ ಕಾಮುಕನಿಂದ ಅತ್ಯಾಚಾರ

80 ವರ್ಷದ ವೃದ್ಧೆ ಮೇಲೆ ಯುವಕ ಅತ್ಯಾಚಾರ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ‌.

80-year-old-woman-raped-in-davanagere
ಹೊನ್ನಾಳಿಯಲ್ಲಿ ಮನೆಗೆ ನುಗ್ಗಿ 80ರ ವೃದ್ಧೆ ಮೇಲೆ ಕಾಮುಕನಿಂದ ಅತ್ಯಾಚಾರ

By

Published : Dec 5, 2022, 1:38 PM IST

ದಾವಣಗೆರೆ:80 ವರ್ಷದ ಒಂಟಿ ವೃದ್ಧೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ‌. ರವಿ(30) ಎಂಬಾತನೆ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ.

ಶನಿವಾರ ಬೆಳ್ಳಂಬೆಳಗ್ಗೆ ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿದ ಆರೋಪಿ ಮನೆಯೊಳಗೆ ನುಗ್ಗಿ ಕೃತ್ಯ ಎಸಗಿದ್ದಾನೆ. ಮನೆಯ ಅಡುಗೆ ಕೋಣೆಗೆ ವೃದ್ಧೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ವೃದ್ಧೆಯು ಪರಿಪರಿಯಾಗಿ ಬೇಡಿಕೊಂಡರೂ ಕಾಮುಕ ದುಷ್ಕೃತ್ಯ ಮೆರೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಹೊನ್ನಾಳಿ ಪೊಲೀಸ್​ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಟುಕಾಟ ನಡೆಸಿದ್ದಾರೆ.

ಒಂಟಿಯಾಗಿದ್ದ ವೃದ್ಧೆ:20 ವರ್ಷಗಳ ಹಿಂದೆ ಪತಿ ಸಾವನಪ್ಪಿದ ಬಳಿಕ ವೃದ್ಧೆ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಮಕ್ಕಳಿಲ್ಲದ ಕಾರಣ ಕೂಲಿ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಪ್ರಕರಣದ ಬಳಿಕ ಸ್ಥಳೀಯರು ವೃದ್ಧೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಯುವತಿಯರ ಬಾಡಿ ಶೇಪ್​ ನೋಡಿ ದರ ನಿಗದಿ..ವೇಶ್ಯಾವಾಟಿಕೆ ಜಾಲ ಭೇದಿಸಿ, ಒಬ್ಬನ ಬಂಧಿಸಿದ ಪೊಲೀಸರು

ABOUT THE AUTHOR

...view details