ದಾವಣಗೆರೆ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಮಳಲಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಳಲಿ ತಾಂಡಾದ ಯೋಗೇಂದ್ರ ನಾಯ್ಕ್ನ ಶವ ನಿರ್ಜನ ಪ್ರದೇಶದ ದುರ್ವಿಗೆರೆ ಕೆರೆಯ ಬಳಿಯಿರುವ ಸ್ಮಶಾನದ ಬಂಡೆಯ ಪಕ್ಕದ ಮರದ ಕೊಂಬೆಗೆ ನೇತು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಶವ ಇನ್ನು ಮೃತನ ಸಂಬಂಧಿಕರು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಶವ ಪತ್ತೆಯಾಗಿದ್ದನ್ನು ಗಮನಿಸಿದರೆ ಯೋಗೇಂದ್ರ ನಾಯ್ಕ್ನನ್ನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಬಗ್ಗೆ ಅನುಮಾನ ಮೂಡುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮೃತನ ಸಂಬಂಧಿಕರು ಆಗ್ರಹಿಸಿದ್ದಾರೆ.
ಇನ್ನು ಸ್ಥಳಕ್ಕೆ ಆಗಮಿಸಿದ ಚನ್ನಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಯೋಗೇಂದ್ರ ನಾಯ್ಕನದ್ದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.