ದಾವಣಗೆರೆ:ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ವ್ಯಕ್ತಿ: ಆಸ್ಪತ್ರೆಗೆ ಸೇರಿಸಿದ ರೇಣುಕಾಚಾರ್ಯ - Renuka Acharya news
ಹೊನ್ನಾಳಿ ಪಟ್ಟಣದ ಗೊಲ್ಲರಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ರಸ್ತೆ ಬದಿ ಬಿದ್ದು ಒದ್ದಾಡುತ್ತಿದ್ದರು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಎಂ.ಪಿ. ರೇಣುಕಾಚಾರ್ಯ ಆಸ್ಪತ್ರೆಗೆ ಸೇರಿಸಲು ವಾಹನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ವ್ಯಕ್ತಿ
ಹೊನ್ನಾಳಿ ಪಟ್ಟಣದ ಗೊಲ್ಲರಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ರಸ್ತೆ ಬದಿ ಬಿದ್ದಿದ್ದರು. ಈ ಮಾರ್ಗದ ಮೂಲಕ ಕುಂದೂರಿಗೆ ಸಂಚರಿಸುತ್ತಿದ್ದ ರೇಣುಕಾಚಾರ್ಯ ಕಾರಿನಿಂದ ಇಳಿದು ಬಂದಿದ್ದಾರೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಕೂಡಲೇ ವಾಹನ ವ್ಯವಸ್ಥೆ ಮಾಡಿದರು. ಹೊನ್ನಾಳಿ ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Last Updated : Nov 27, 2020, 12:56 PM IST