ಕರ್ನಾಟಕ

karnataka

ETV Bharat / state

ಸ್ಕೂಟಿ-ಟಿಪ್ಪರ್ ಡಿಕ್ಕಿ : ಮಹಿಳೆ ಮೇಲೆ ಹರಿದ ಚಕ್ರ - ದಾವಣಗೆರೆಯಲ್ಲಿ ಅಪಘಾತ

ಹರಿಹರ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಹಾಗೂ ಸ್ಕೂಟಿ ಮಧ್ಯೆ ಡಿಕ್ಕಿ ಸಂಭವಿಸಿ, ಮಹಿಳೆ ಮೇಲೆ ಟಿಪ್ಪರ್ ಚಕ್ರ ಹರಿದಿದೆ. ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ..

ಸ್ಕೂಟಿ ಟಿಪ್ಪರ್ ಡಿಕ್ಕಿ,Davanagere accident
ಸ್ಕೂಟಿ ಟಿಪ್ಪರ್ ಡಿಕ್ಕಿ

By

Published : Dec 18, 2021, 4:30 PM IST

ದಾವಣಗೆರೆ :ನಗರದಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಕಳೆದೆರಡು ದಿನಗಳ ಹಿಂದೆಯಷ್ಟೇ ಕಾರು ಡಿಕ್ಕಿಯಾಗಿ ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನಪ್ಪಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೋರ್ವ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮಹಿಳೆ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಪಿಬಿ ರಸ್ತೆಯ ರೇಣುಕಾ ಮಂದಿರ ಬಳಿ ನಡೆದಿದೆ.

ಮೆಹರುನ್ನೀಸಾ (48) ಎಂಬುವರು ಸಾವನ್ನಪ್ಪಿದ ಮಹಿಳೆ ಎಂದು ತಿಳಿದು ಬಂದಿದೆ. ಮೃತ ಮೆಹರುನ್ನೀಸಾ ದಾವಣಗೆರೆ ನಗರದ ಹೊರವಲಯದ ಕರೂರು ನಿವಾಸಿಯಾಗಿದ್ದಾರೆ.

ಹರಿಹರ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಹಾಗೂ ಸ್ಕೂಟಿ ಮಧ್ಯೆ ಡಿಕ್ಕಿ ಸಂಭವಿಸಿ, ಮಹಿಳೆ ಮೇಲೆ ಟಿಪ್ಪರ್ ಚಕ್ರ ಹರಿದಿದೆ. ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ.

(ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್​, ಕನ್ನಡಿಗರ ವಾಹನಗಳ ಮೇಲೆ ಶಿವಸೇನೆ ಕಲ್ಲು ತೂರಾಟ - ವಿಡಿಯೋ)

ABOUT THE AUTHOR

...view details