ದಾವಣಗೆರೆ:ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದು, ಪ್ರೊಬೇಷನರಿ ಸಬ್ ಇನ್ಸ್ಪೆಕ್ಟರ್ ಗಾಯಗೊಂಡ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಲಾರಿ-ಕಾರು ನಡುವೆ ಅಪಘಾತ: ಮಹಿಳೆ ಸಾವು, ಪ್ರೊಬೇಷನರಿ ಎಸ್ಐಗೆ ಗಾಯ - jagalur police station news
ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗವಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪ್ರೊಬೇಷನರಿ ಎಸ್ಐ ಕುಟುಂಬದವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾನನಕಟ್ಟೆ ಸಮೀಪದಲ್ಲಿ ಅಡ್ಡ ಬಂದ ಬೈಕ್ ತಪ್ಪಿಸಲು ಹೋದಾಗ ಲಾರಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾಳೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಅಮರಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗವಾಗಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪ್ರೊಬೇಷನರಿ ಎಸ್ಐ ಕುಟುಂಬದವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾನನಕಟ್ಟೆ ಸಮೀಪದಲ್ಲಿ ಅಡ್ಡ ಬಂದ ಬೈಕ್ ತಪ್ಪಿಸಲು ಹೋದಾಗ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿ ಓರ್ವ ಕಾನ್ಸ್ಟೇಬಲ್ ಸೇರಿ ಮೂವರಿದ್ದರು. ಪ್ರೊಬೇಷನರಿ ಎಸ್ಐ ಬಸವಲಿಂಗಪ್ಪ ವಡ್ಡರ್ ಬೆಂಗಳೂರಿನ ಗೋಪಾಲನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಾಯಗೊಂಡ ಪ್ರೊಬೇಷನರಿ ಎಸ್ಐ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.