ಕರ್ನಾಟಕ

karnataka

ETV Bharat / state

ದಾವಣಗೆರೆ: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವು, ವೈದ್ಯರ ವಿರುದ್ಧ ಕುಟಂಬಸ್ಥರ ಪ್ರತಿಭಟನೆ - ಈಟಿವಿ ಭಾರತ ಕನ್ನಡ

ಹರ್ಣಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಶಸ್ತ್ರಚಿಕಿತ್ಸೆ ನಂತರ ಸಾವನ್ನಪ್ಪಿದ್ದು, ವೈದ್ಯರ ವಿರುದ್ದ ಕುಟುಂಬಸ್ಥರು ಪ್ರಕರಣ ದಾಖಲಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Kn_dvg_
ಆಸ್ಪತ್ರೆಯಲ್ಲಿ ಮಹಿಳೆ ಸಾವು ವೈದ್ಯರ ವಿರುದ್ಧ ಕುಟಂಬಸ್ಥರ ಪ್ರತಿಭಟನೆ

By

Published : Nov 11, 2022, 4:01 PM IST

ದಾವಣಗೆರೆ: ಹರ್ಣಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿರುವ ಘಟನೆ ನಿಜಲಿಂಗಪ್ಪ ಬಡಾವಣೆಯ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ನಾಗರತ್ನಮ್ಮ (47) ಮೃತ ಮಹಿಳೆ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದ ನಿವಾಸಿಯಾಗಿರುವ ಮೃತ ನಾಗರತ್ನಮ್ಮ ಅವರು ಹರ್ಣಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ನ.7ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನ.8 ರಂದು ಶಸ್ತ್ರಚಿಕಿತ್ಸೆಗೊಳಪಡಿಸಲಾಗಿತ್ತು. ಆರೋಗ್ಯವಾಗಿಯೇ ಇದ್ದ ನಾಗರತ್ನಮ್ಮ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವುದು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಸಕಾಲಕ್ಕೆ ವೈದ್ಯರು ಬಾರದ ಹಿನ್ನೆಲೆ ನಾಗರತ್ನಮ್ಮ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ವೈದ್ಯರ ವಿರುದ್ದ ಪ್ರಕರಣ ದಾಖಲಿಸಿ ವೈದ್ಯರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಆಸ್ಪತ್ರೆಯ ಶವಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ:ಗೋವಿಗಾಗಿ ಮೇವು ಮೆರವಣಿಗೆ ವೇಳೆ ಘರ್ಷಣೆಗೆ ಪ್ರಚೋದನೆ: ದೂರು ದಾಖಲು

ABOUT THE AUTHOR

...view details