ಕರ್ನಾಟಕ

karnataka

ETV Bharat / state

ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ ಯುವ ಪತ್ರಕರ್ತ ದುರ್ಮರಣ... ಸಿಎಂ ಸಂತಾಪ - ದಾವಣಗೆರೆ: ಅಪಘಾತ ಸುದ್ದಿ

ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವಿಗೀಡಾದ ಯುವ ಪತ್ರಕರ್ತ ಎಂ.ಸಿ ಮಂಜುನಾಥ್

By

Published : Nov 20, 2019, 10:43 PM IST

Updated : Nov 21, 2019, 2:26 AM IST

ದಾವಣಗೆರೆ: ಬೈಕ್​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

30 ವರ್ಷದ ಎಂ.ಸಿ ಮಂಜುನಾಥ್ ಮೃತ. ಶಿವಮೊಗ್ಗದ ವಿದ್ಯಾನಗರ ನಿವಾಸಿಯಾದ ಮಂಜುನಾಥ್ ಹಾವೇರಿಗೆ ಕಳೆದ 5 ತಿಂಗಳ ಹಿಂದೆ ವರ್ಗಾವಣೆಯಾಗಿ ಬಂದಿದ್ದರು.

ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗಕ್ಕೆ ತನ್ನ ಸಹೋದರಿ ಮನೆಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಸಂತಾಪ

ಜಿಲ್ಲಾ ವರದಿಗಾರ ಎಂ.ಸಿ. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮಂಜುನಾಥ್ ಅವರ ಅಕಾಲಿಕ ನಿಧನದಿಂದ ಒಬ್ಬ ಯುವ, ಉತ್ಸಾಹಿ ಪತ್ರಕರ್ತನನ್ನು ಕಳೆದುಕೊಂಡಿದ್ದೇವೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Last Updated : Nov 21, 2019, 2:26 AM IST

ABOUT THE AUTHOR

...view details