ಕರ್ನಾಟಕ

karnataka

ETV Bharat / state

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮ.. - ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮ

ಮೆಕ್ಕೆಜೋಳಕ್ಕೆ ಬೆಂಕಿ ತಗುಲಿ ಹಾನಿಗೊಳಗಾದ ರೈತನಿಗೆ ವೈಯಕ್ತಿಕವಾಗಿ ₹50,000 ನೀಡಿದರು. ಬಳಿಕ‌ ಮಾತನಾಡಿದ ಅವರು, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಅವಕಾಶ ನೀಡುವಂತೆ‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

destroyed millions of rupees worth of maize
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮ

By

Published : Apr 13, 2020, 5:05 PM IST

ದಾವಣಗೆರೆ :ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮವಾಗಿರುವ ಘಟನೆ ತಾಲೂಕಿನ ಐಗೂರು ಗ್ರಾಮದಲ್ಲಿ ನಡೆದಿದೆ.

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮ..
ರೈತ ಹಾಲೇಶಪ್ಪ ಎಂಬುವರು ನೂರಾರು ಚೀಲಗಳಷ್ಟು ಮೆಕ್ಕೆಜೋಳವನ್ನು ಕಣದಲ್ಲಿ ಹಾಕಿದ್ದರು.‌ ಆದರೆ, ಬೆಳಗ್ಗೆ ಎದ್ದು ನೋಡಿದಾಗ ಮೆಕ್ಕೆಜೋಳ ಸುಟ್ಟು ಕರಕಲಾಗಿತ್ತು. ರಾತ್ರಿ ಯಾರೋ ಕಿಡಿಗೇಡಿಗಳು ಬೀಡಿ ಅಥವಾ ಸಿಗರೇಟ್ ಸೇದಿ ಬಿಸಾಡಿದ ಕಾರಣ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಆರ್ ಬೀಳಗಿ ಭೇಟಿ ನೀಡಿದರು.
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು‌ ಭಸ್ಮ..

ಈ ವೇಳೆ ಬೈರತಿ ಬಸವರಾಜ್, ಮೆಕ್ಕೆಜೋಳಕ್ಕೆ ಬೆಂಕಿ ತಗುಲಿ ಹಾನಿಗೊಳಗಾದ ರೈತನಿಗೆ ವೈಯಕ್ತಿಕವಾಗಿ ₹50,000 ನೀಡಿದರು. ಬಳಿಕ‌ ಮಾತನಾಡಿದ ಅವರು, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಅವಕಾಶ ನೀಡುವಂತೆ‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ಅವರಲ್ಲಿ ಮನವಿ ಮಾಡುತ್ತೇನೆ ಎಂದರು. ಇದಕ್ಕೂ ಮುನ್ನ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಹಗಲಿರುಳು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಧನ್ಯವಾದ ತಿಳಿಸಿದ ಸಚಿವರು, ಏನೇ ಸಮಸ್ಯೆ ಇದ್ದರೆ ಗಮನಕ್ಕೆ ತನ್ನಿ‌ ಎಂದರು.

For All Latest Updates

ABOUT THE AUTHOR

...view details