ದಾವಣಗೆರೆ :ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ನಿಂದ ದೂರು ನೀಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಹಿಂದೂಯೇತರ ಧರ್ಮದ ಬೆಳವಣಿಗೆ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದೆ. ಕೆಪಿಸಿಸಿ ವಕ್ತಾರ ಡಿ. ಬಸವರಾಜ ನೇತೃತ್ವದ ತಂಡ ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಗೆ ತೆರಳಿ, ದೂರು ನೀಡಿದೆ.
ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಬೆಂಗಳೂರಿನಲ್ಲಿ ಬೈಕ್ ಅಪಘಾತ ವಿಚಾರವಾಗಿ ನಡೆದ ಕೊಲೆಯ ಪ್ರಕರಣದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಸಿ.ಟಿ. ರವಿ ಅವರು ಭಾಷೆಯ ಹೆಸರಿನಲ್ಲಿ ಹೇಳಿಕೆ ನೀಡಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.