ದಾವಣಗೆರೆ:ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಮುನ್ನೆಲೆಗೆ ಬಂದ ಬೆನ್ನಲ್ಲೇ ಕೈ ಪಕ್ಷದ ಕಾರ್ಯಕರ್ತರು ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ನಡೆಯಿತು.
‘ಮುಂದಿನ ಸಿಎಂ ಸಿದ್ದರಾಮಯ್ಯಗೆ ಜಯವಾಗಲಿ’ - ಶಾಸಕರ ಪುತ್ರಿ ಮದುವೆಯಲ್ಲಿ ಕೈ ಕಾರ್ಯಕರ್ತರ ಘೋಷಣೆ - Siddaramaiah in Marriage of Harihara MLA Ramappa daughter
ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪನವರ ಮಗಳ ಮದುವೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದ್ದಾರೆ.
![‘ಮುಂದಿನ ಸಿಎಂ ಸಿದ್ದರಾಮಯ್ಯಗೆ ಜಯವಾಗಲಿ’ - ಶಾಸಕರ ಪುತ್ರಿ ಮದುವೆಯಲ್ಲಿ ಕೈ ಕಾರ್ಯಕರ್ತರ ಘೋಷಣೆ Activists shouted that the next chief minister was Siddaramaiah](https://etvbharatimages.akamaized.net/etvbharat/prod-images/768-512-12333678-353-12333678-1625221576694.jpg)
ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪನವರ ಮಗಳ ಮದುವೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಲ್ಯಾಣ ಮಂಟಪಕ್ಕೆ ಆಗಮಿಸುತ್ತಿದ್ದಂತೆ, ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಯವಾಗಲಿ’ ಎಂದು ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಘೋಷಣೆ ಕೂಗಿದರು.
ಶಾಸಕ ರಾಮಪ್ಪನವರ ಮಗಳ ಮದುವೆಯಲ್ಲಿ ಸಾಮಾಜಿಕ ಅಂತರ ಮಾಯವಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಸಾಮಾಜಿಕ ಅಂತರ ಮರೆತು ಜನ ಗುಂಪು ಸೇರಿದ್ರು. ಮದುವೆಗೆ ಕೇವಲ 40 ಜನರಿಗೆ ಮಾತ್ರ ಅವಕಾಶ ಇದ್ದರು ಕೂಡ ಮದುವೆಯಲ್ಲಿ ಜನಪ್ರತಿನಿಧಿಗಳು ಕೋವಿಡ್ ನಿಯಮಾವಳಿಯನ್ನು ಗಾಳಿಗೆ ತೂರಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.