ದಾವಣಗೆರೆ:ನಟಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಗರದ ಜಿಎಂಐಟಿ ಹೆಲಿಪ್ಯಾಡ್ನಲ್ಲಿ ನಡೆದಿದೆ.
ಪವರ್ ಸ್ಟಾರ್ ನೋಡಲು ಮುಗಿಬಿದ್ದ ಅಭಿಮಾನಿಗಳು: ನಿಯಂತ್ರಿಸಲು ಪೊಲೀಸರ ಹರಸಾಹಸ! - ದಾವಣಗೆರೆ ಲೇಟೆಸ್ಟ್ ನ್ಯೂಸ್
ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪುನೀತ್ ರಾಜ್ ಕುಮಾರ್ ಆಗಮಿಸಿದ್ದರು. ಈ ವೇಳೆ ಅಪ್ಪು ನೋಡಲು ಅಭಿಮಾನಿಗಳು ಮುಗಿಬಿದ್ದರು.
ಜಿಲ್ಲೆಯ ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಡೆಯುತ್ತಿರುವ ಹರ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪುನೀತ್, ಸಕ ಮುನಿರತ್ನ ಜೊತೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಬಂದಿಳಿದರು. ಅಪ್ಪು ನೋಡಲು ಬೆಳಗ್ಗೆಯೇ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಪವರ್ ಸ್ಟಾರ್ ಹೆಲಿಕಾಪ್ಟರ್ನಿಂದ ಇಳಿದು ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ಹತ್ತಿರದಿಂದ ನೋಡಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಮಾಧ್ಯಮದವರು ಮಾತನಾಡಿಸಲು ಯತ್ನಿಸಿದರೂ ಪುನೀತ್ ರಾಜ್ ಕುಮಾರ್ ಮಾತನಾಡದೇ ಹರಿಹರದ ಪಂಚಮಸಾಲಿ ಪೀಠಕ್ಕೆ ತೆರಳಿದರು.