ದಾವಣಗೆರೆ:ಜಿಲ್ಲೆಯ ಚನ್ನಗಿರಿ ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹಾಗೂ ಖ್ಯಾತ ಚಲನಚಿತ್ರ ನಟ ಉಪೇಂದ್ರ ಭೇಟಿ ನೀಡಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಸದಸ್ಯನನ್ನು ಭೇಟಿಯಾಗಲಿದ್ದಾರೆ.
ಅರೇಹಳ್ಳಿ ಗ್ರಾಮಕ್ಕಿಂದು ಉಪ್ಪಿ ಆಗಮನ : ಚುನಾವಣೆಯಲ್ಲಿ ಗೆದ್ದ ಪ್ರಜಾಕೀಯ ಬೆಂಬಲಿಗನ ಭೇಟಿ - Upendra latest news
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ಬೆಂಬಲಿಗನಾಗಿರುವ ಚೇತನ್ ಕುಮಾರ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಅವರನ್ನು ಭೇಟಿ ಮಾಡಲು ಇಂದು ಪ್ರಜಾಕೀಯ ಪಕ್ಷದ ಸಂಸ್ಥಾಪಕ ಹಾಗೂ ನಟ ಉಪೇಂದ್ರ ಅರೇಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.
ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮ ಪಂಚಾಯಿತಿಯ ಅರೇಹಳ್ಳಿ ಗ್ರಾಮದ ಎಸ್ಸಿ ಮೀಸಲು ಕ್ಷೇತ್ರದಿಂದ ಪ್ರಜಾಕೀಯ ತತ್ವದ ಅಡಿಯಲ್ಲಿ ಚೇತನ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದರು. ಹಾಗೆಯೇ ಚೇತನ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಜಾಕೀಯ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸುವುದಾಗಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು.
ಈ ವಿಡಿಯೋ ಕುರಿತು ಉಪೇಂದ್ರ ಟ್ವಿಟ್ ಮಾಡಿ ಚೇತನ್ಗೆ ಶುಭ ಹಾರೈಸಿದ್ದರು. ಆದ್ದರಿಂದ ರಿಯಲ್ ಸ್ಟಾರ್ ಉಪೇಂದ್ರ ಗ್ರಾ. ಪಂ.ನಲ್ಲಿ ಗೆಲುವು ಸಾಧಿಸಿ ತಮ್ಮ ಪ್ರಜಾಕೀಯ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಚೇತನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.