ದಾವಣಗೆರೆ: ಹುಬ್ಬಳ್ಳಿಯಲ್ಲಿ ಸರಳ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಅವರ ಹತ್ಯೆಯ ಬೆನ್ನಲ್ಲೇ ಇದೀಗ ರಾಜ್ಯ ಗೃಹ ಇಲಾಖೆ ಮಹಾನಗರಗಳಲ್ಲಿರುವ ಹೋಟೆಲ್, ಮಾಲ್ಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಯನ್ನು ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಕಡ್ಡಾಯಗೊಳಿಸುವಂತೆ ಆದೇಶ ಹೊರಡಿಸಿದೆ. ಈ ಕುರಿತು ನಗರದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಟೇಲ್, ಮಾಲ್ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಕನಿಷ್ಠ 30 ದಿನಗಳ ದೃಶ್ಯಾವಳಿಗಳಿರಬೇಕು. ಮುಖ್ಯದ್ವಾರದಲ್ಲಿ ಡೋರ್ ಫ್ರೇಂ ಮೆಟಲ್ ಡಿಟೆಕ್ಟರ್, ಹ್ಯಾಂಡ್ ಮೆಟಲ್ ಡಿಟೆಕ್ಟರ್ ಹಾಗೂ ಬ್ಯಾಗ್ ಸ್ಕ್ಯಾನರ್ಗಳ ಅಳವಡಿಕೆ ಕಡ್ಡಾಯ.