ದಾವಣಗೆರೆ: ಹಳ್ಳಿಗಳಲ್ಲಿ ಸೋಂಕಿನಿಂದ ಸಾವಾಗುತ್ತಿದ್ದರೂ ಜಿಲ್ಲಾಡಳಿತ ಮುಚ್ಚಿಡುತ್ತಿದೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಜಿಲ್ಲಾಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಹಳ್ಳಿಗಳಲ್ಲಿ ಸಾವಾಗುತ್ತಿದ್ದರೂ ಜಿಲ್ಲಾಡಳಿತ ಮುಚ್ಚಿಡುತ್ತಿದೆ: ಶಾಸಕ ಎಸ್ ರಾಮಪ್ಪ ಆರೋಪ - ರಾಮಪ್ಪ ಆರೋಪ3.
ಪ್ರತಿ ಹಳ್ಳಿಗಳಲ್ಲಿ ಸೋಂಕು ತಡೆಯಬೇಕಾದ ಜಿಲ್ಲಾಡಳಿತ ಸೂಕ್ತವಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಬಡವರನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಬೀದಿಪಾಲಾಗುತ್ತಿದ್ದಾರೆ. ಸಕಾಲಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ನಾನು ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹ ಕುಳಿತುಕೊಳ್ಳುವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ, ಹರಿಹರ ತಾಲೂಕಿನ ಹನಗವಾಡಿ ಹಾಗೂ ಕಡರನಾಯಕನಹಳ್ಳಿ ತಲಾ 15 ರಿಂದ 20 ಜನರ ಸಾವಾಗಿದೆ. ಜಿಲ್ಲಾಡಳಿ ಮಾತ್ರ ಸೂಕ್ತ ಮಾಹಿತಿ ನೀಡುತ್ತಿಲ್ಲ ಎಂದು ಶಾಸಕ ಎಸ್. ರಾಮಪ್ಪ ಆರೋಪಿಸಿದ್ದಾರೆ.
ಪ್ರತಿ ಹಳ್ಳಿಗಳಲ್ಲಿ ಸೋಂಕು ತಡೆಯಬೇಕಾದ ಜಿಲ್ಲಾಡಳಿತ ಸೂಕ್ತವಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಬಡವರನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಬೀದಿಪಾಲು ಮಾಡುತ್ತಿದ್ದಾರೆ. ಸಕಾಲಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ನಾನು ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹ ಕುಳಿತುಕೊಳ್ಳುವೆ ಎಂದು ಎಚ್ಚರಿಕೆ ನೀಡಿದ್ದಾರೆ.