ದಾವಣಗೆರೆ:ಸಿಎಂ ಬಿ.ಎಸ್. ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಈಗ ಕೊರೊನಾ ಇದೆ, ಯಡಿಯೂರಪ್ಪನವರನ್ನು ಬದಲಾಯಿಸುವ ಪರಿಸ್ಥಿತಿ ಇಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಿಎಂ ಪರ ಬ್ಯಾಟ್ ಮಾಡಿದರು.
ಸಿಎಂ ಬಿಎಸ್ವೈಗೆ ಅಖಿಲ ಭಾರತ ವೀರಶೈವ ಮಹಾಸಭೆ ಬೆಂಬಲ; ಶಾಮನೂರು - shamanuru shivashankarappa pressmeet
ಮುಖ್ಯಮಂತ್ರಿ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ. ಹೀಗಾಗಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ಹೇಳಿದ್ರು.
dvg
ಈಗಾಗಲೇ ಸ್ವಾಮೀಜಿಗಳು ಸಹ ಈ ಬಗ್ಗೆ ಮಾತಾಡಿದ್ದು, ಜೊತೆಗೆ ವೀರಶೈವ ಮಹಾಸಭೆ ಸಹ ಯಡಿಯೂರಪ್ಪ ಅವರ ಜೊತೆಗಿದೆ, ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿಎಂ ಯಡಿಯೂರಪ್ಪ
Last Updated : Jun 18, 2021, 7:46 PM IST