ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕೋಡಿ :ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಸಂಘಟನೆಗಳ ನೆತೃತ್ವದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಸೇರಿದ ಎಸ್ಎಸ್ಯುಐ ಕಾರ್ಯಕರ್ತರು, ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಲು ಹೊರಟಿದೆ. ಇದು ಸರಿಯಲ್ಲ, ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಛೇರಿ ಮುಂದೆ ಸಿಪಿಐಎಮ್ ಪಕ್ಷದಿಂದ ಸಿಎಎ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಾಸ್ ತೆಗೆದು ಕೊಳ್ಳಬೇಕೆಂದು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪೌರತ್ವದ ಕಿಚ್ಚು : ರಾಜ್ಯಾದ್ಯಂತ ಹೆಚ್ಚಿದ ಪ್ರತಿಭಟನೆ ಬಿಜೆಪಿ ಸರ್ಕಾರ ಸಹೋದರತೆಯಿಂದ ಬದುಕುತ್ತಿರುವ ಧರ್ಮಗಳ ನಡುವೆ ಸಿಎಎ ಜಾರಿಗೆ ತರುವ ಮೂಲಕ ಬೆಂಕಿ ಹಾಕಲು ಹೊರಟಿದೆ ಎಂದು ಕೆಂದ್ರ ಸಕಾ್ರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೋಡಿಯಲ್ಲೂ ಸಹ ಪೌರತ್ವ ಮಸೂದೆ ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸಿಎಎ ಮತ್ತು ಎನ್ಅರ್ಸಿ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.