ದಾವಣಗೆರೆ:ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿರುವ ಬೆನ್ನಲ್ಲೇ ಜಿಲ್ಲೆಯ ಬಹತೇಕ ಎಲ್ಲ ಕೆರೆಗಳು ಭರ್ತಿಯಾಗಿವೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದರೆ, ಇನ್ನು ಕೆಲ ರೈತರ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿರುವುದು ಆತಂಕ ಸೃಷ್ಟಿ ಮಾಡಿದೆ.
ದಾವಣಗೆರೆ ತಾಲೂಕಿನ ಅಣಜಿ ಕೆರೆ 40 ವರ್ಷಗಳ ನಂತರ ಕೋಡಿ ಬಿದ್ದಿದ್ದು, ರೈತರ ಜಮೀನುಗಳಿಗೆ ಆಸರೆಯಾಗಿದೆ. 900 ಎಕರೆಯಷ್ಟು ವಿಶಾಲವಾದ ಅಣಜಿ ಕೆರೆಯ ಸುತ್ತಮುತ್ತಲಿನ ಅಡಕೆ, ಮೆಕ್ಕೆಜೋಳ ಬೆಳೆ ಬೆಳೆದಿದ್ದ ರೈತರ ಜಮೀನುಗಳಿಗೆ ಕೆರೆ ನೀರು ನುಗ್ಗಿದ್ದರಿಂದ ರೈತರು ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣ ಆಗಿದೆ.