ದಾವಣಗೆರೆ: ರಾಜ್ಯದಲ್ಲಿ ಮತ್ತೊಂದು ಮೀಸಲಾತಿ ಪಾದಯಾತ್ರೆ ಆರಂಭವಾಗುವ ಎಲ್ಲ ಲಕ್ಷಣಗಳು ಇವೆ. ಮಾರ್ಚ್ 25ರಿಂದ ಮಾದಿಗ ಸಮಾಜದಿಂದ ನ್ಯಾಯಮೂರ್ತಿ ಎ.ಜೆ. ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ದಾವಣಗೆರೆಯಲ್ಲಿ ಷಡಕ್ಷರಿಮನಿ ಸ್ವಾಮೀಜಿ ಸುಳಿವು ನೀಡಿದ್ದಾರೆ.
ಮೀಸಲಾತಿ ಬೇಡಿಕೆ: ದಾವಣಗೆರೆಯಿಂದ ಹೊರಡಲಿದೆಯಾ ಮತ್ತೊಂದು ಪಾದಯಾತ್ರೆ? - ಮಾದಿಗರ ಸಮಾವೇಶ
ಇದೇ 25 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ. ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಾದಿಗರ ಸಮಾವೇಶ ಮಾಡಿ ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೋಡಿಹಳ್ಳಿ ಮಠದ ಷಡಕ್ಷರಿಮನಿ ಸ್ವಾಮೀಜಿ ಮಾತನಾಡಿ, ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಬಲರ ಪಾಲಾಗುತ್ತಿದ್ದು, ಕನಿಷ್ಠ ಮಟ್ಟದಲ್ಲಿ ಜೀವನ ನಿರ್ವಹಣೆ ಮಾಡುತ್ತಿರುವ ಮಾದಿಗರಿಗೆ ಅನ್ಯಾಯವಾಗಿದೆ. ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಲ್ಲಿ ಮಾದಿಗರು ಕನಿಷ್ಟ ಮಟ್ಟದ ಜೀವನ ನಡೆಸುತ್ತಿದ್ದಾರೆ. ಈ ಸಮಾಜಕ್ಕೆ ನ್ಯಾಯ ಒದಗಿಸಲು ಇದೇ 25 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ. ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಾದಿಗರ ಸಮಾವೇಶ ಮಾಡಿ ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.