ದಾವಣಗೆರೆ:ಎಪಿಎಂಸಿ ಕಾಯ್ದೆಗೆ ಕೇಂದ್ರ ಸರ್ಕಾರವು ತಿದ್ದುಪಡಿ ತಂದಿರುವುದು ರೈತರಿಗೆ ಅನುಕೂಲಕರವಾಗಿದೆ. ಆದರೆ ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಕಿಡಿಕಾರಿದರು.
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ರೈತರಿಗೆ ವರದಾನ: ವೀರೇಶ್ ಹನಗವಾಡಿ
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದಾಗಿ ರೈತರು ಭವಿಷ್ಯದಲ್ಲಿ ಹಲವು ರೀತಿಯ ಅನುಕೂಲ ಪಡೆಯಲಿದ್ದಾರೆ. ಎಲ್ಲಾ ಸಾಧಕ-ಬಾಧಕ ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದಾಗಿ ರೈತರು ಭವಿಷ್ಯದಲ್ಲಿ ಹಲವು ರೀತಿಯ ಅನುಕೂಲ ಪಡೆಯಲಿದ್ದಾರೆ. ಎಲ್ಲಾ ಸಾಧಕ-ಬಾಧಕ ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕೆಲ ರೈತರೊಟ್ಟಿಗೆ ಕಾಂಗ್ರೆಸ್ ಈ ಬಗ್ಗೆ ಅಪಪ್ರಚಾರ ನಡೆಸುತ್ತಿದೆ. ಇದು ಸರಿಯಲ್ಲ. ಈ ಕಾಯ್ದೆಗೆ ತಿದ್ದುಪಡಿ ಆದ ಬಳಿಕ ನೇರವಾಗಿ ರೈತರು ಬೆಳೆ ಮಾರಾಟ ಮಾಡಬಹುದು. ಈ ಮೂಲಕ ವಂಚನೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು. ಆದ್ರೆ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ. ರೈತರು ಪ್ರಬುದ್ಧರಾಗುತ್ತಿದ್ದಾರೆ. ಮಾಹಿತಿ ಪಡೆಯುವಷ್ಟು ಬುದ್ಧಿವಂತರಾಗಿದ್ದಾರೆ. ಕಾರ್ಪೋರೇಟ್ ಸಂಸ್ಥೆಗಳು ಬೆಳೆ ಖರೀದಿಸಿದರೂ ರೈತರಿಗೆ ನಷ್ಟ ಆಗುವುದಿಲ್ಲ. ಎಪಿಎಂಸಿಗಳಲ್ಲಿ ದಲ್ಲಾಳಿಗಳಿಂದ ಮೋಸ ಹೋಗುತ್ತಾರೆ. ಆದ್ರೆ ಕಾಯ್ದೆ ತಿದ್ದುಪಡಿ ಆಗುವುದರಿಂದ ಇದಕ್ಕೆಲ್ಲಾ ಬ್ರೇಕ್ ಬೀಳುತ್ತದೆ. ಸಾಕಷ್ಟು ಅನುಕೂಲ ಇದ್ದರೂ ವಿನಾ ಕಾರಣ ವಿರೋಧ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.