ಕರ್ನಾಟಕ

karnataka

ETV Bharat / state

ಕೆಪಿಎಸ್​​ಸಿ ಪರೀಕ್ಷಾ ಅಕ್ರಮ: ಪೊಲೀಸ್ ಪೇದೆ​ ಸೇರಿ ಇಬ್ಬರು ಅರೆಸ್ಟ್​​ - ಅಕ್ರಮದಲ್ಲಿ ಪೊಲೀಸರು ಭಾಗಿ

ಕೆಪಿಎಸ್​ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಮತ್ತಿಬ್ಬರು ಪೊಲೀಸರ ಅತಿಥಿಗಳಾಗಿದ್ದು, ಇನ್ನೂ ಹಲವು ಮಂದಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಪೊಲೀಸರು ತೀವ್ರ ಶೋಧದಲ್ಲಿ ತೊಡಗಿದ್ದಾರೆ.

Arrested In Kpsc Exam Illegal case

By

Published : Jul 30, 2019, 7:51 PM IST

ದಾವಣಗೆರೆ:ಕೆಪಿಎಸ್​ಸಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಅಪರಾಧ ವಿಭಾಗದ ಪೊಲೀಸರ ಬೇಟೆ ಮುಂದುವರಿದಿದೆ. ಇಂದು ಪೊಲೀಸ್​ ಕಾನ್ಸ್​ಸ್ಟೇಬಲ್​ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧನಕ್ಕೆ ಒಳಗಾದವರ ಸಂಖ್ಯೆ 16ಕ್ಕೆ ಏರಿದೆ.

ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆ ಪೇದೆ ಮಂಜುನಾಥ ಹಾಗೂ ದಾವಣಗೆರೆಯ ನಿಟ್ಟುವಳ್ಳಿಯ ನಿವಾಸಿ ರಾಜಪ್ಪ ಬಂಧಿತರು. ಈ ಅಕ್ರಮದಲ್ಲಿ ಭಾಗಿಯಾದವರ ಹೆಡೆಮುರಿ ಕಟ್ಟುತ್ತಿರುವ ಪೊಲೀಸರು, ದಿನ ಕಳೆದಂತೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಳೆದ ಶನಿವಾರವಷ್ಟೇ ಅಕ್ರಮದಲ್ಲಿ ಭಾಗಿಯಾಗಿದ್ದ ಬೆಂಗಳೂರು ಜಲಮಂಡಳಿ ಸಹಾಯಕ ಸಾಗರ್ ಕರ್ಕಿ, ಕಲಬುರಗಿ ರೇಷ್ಮೆ ಪದವಿ ಕಾಲೇಜು ಪ್ರಾಚಾರ್ಯ ಶ್ರೀಶೈಲ್ ಹಳ್ಳಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಹಾವೇರಿಯ ಮಾರುತಿ ಎಂಬುವರನ್ನು ಬಂಧಿಸಿದ್ದರು.

ಈ ಪ್ರಕರಣದ ಜಾಲ ರಾಜ್ಯಾದ್ಯಂತ ಹರಡಿರುವ ಶಂಕೆ ವ್ಯಕ್ತವಾಗಿದೆ. 2017ರ ಅಕ್ಟೋಬರ್​ನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಪರೀಕ್ಷೆ ನಡೆದಿತ್ತು. ದಾವಣಗೆರೆಯ ನೂತನ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ಕೆಲವರು ಮೈಕ್ರೋ ಫೋನ್​​ಗಳನ್ನು ಬಳಸಿ ಅಕ್ರಮ ಎಸಗಿದ್ದರು. ಈ ವೇಳೆ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು.

ABOUT THE AUTHOR

...view details