ಕರ್ನಾಟಕ

karnataka

ETV Bharat / state

ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಅಗತ್ಯ: ಎಸ್ಪಿ ಹನುಮಂತರಾಯ - Cyber awareness program

ರಾಜ್ಯದಲ್ಲಿ 2018 ರಿಂದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಪೊಲೀಸ್ ಠಾಣೆ ತೆರೆಯಲಾಗಿದೆ. ಜಿಲ್ಲೆಯಲ್ಲಿ 2018 ರಲ್ಲಿ 15, 2019 ರಲ್ಲಿ 44 ಹಾಗೂ 2020 ರಲ್ಲಿ 46 ಪ್ರಕರಣಗಳು ಸೇರಿದಂತೆ ಒಟ್ಟು ಈವರೆಗೆ 105 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ. ಪ್ರಸಕ್ತ ವರ್ಷ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದು, ಈ ಬಗ್ಗೆ ಮಾಹಿತಿ ಇದ್ದವರು ಮಾತ್ರ ದೂರು ನೀಡುತ್ತಿರುವುದು ಬೇಸರದ ಸಂಗತಿ ಎಂದು ಎಸ್​ಪಿ ತಿಳಿಸಿದರು.

SP Hanumantharaya
SP Hanumantharaya

By

Published : Sep 25, 2020, 8:30 PM IST

ದಾವಣಗೆರೆ: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ ಸೈಬರ್ ಅಪರಾಧ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕಳವಳ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ಕ್ರೈಂ ಜಾಗೃತಿ ಅಭಿಯಾನ-2020 ವಿಡಿಯೋ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾದ ನಮ್ಮ ಜೀವನ ಶೈಲಿಯಿಂದಾಗಿ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿವೆ. ಇದರೊಂದಿಗೆ ಹೊಸ ಹೊಸ ರೀತಿಯ ಸಂವಹನ ವ್ಯವಸ್ಥೆಗಳು ಬಳಕೆಯಾಗುತ್ತಿದ್ದು, ಹೆಚ್ಚಾಗಿ ಇದರ ಅಕ್ರಮ ಬಳಕೆ ನಡೆಯುತ್ತಿದೆ. ಇದನ್ನು ತಡೆಯುವ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕಾಗಿದ್ದು, ಸೈಬರ್ ಅಪರಾಧಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ 105 ಸೈಬರ್ ಪ್ರಕರಣಗಳು:
ರಾಜ್ಯದಲ್ಲಿ 2018 ರಿಂದ ಪ್ರತಿ ಜಿಲ್ಲೆಯಲ್ಲಿ ಸೈಬರ್ ಪೊಲೀಸ್ ಠಾಣೆ ತೆರೆಯಲಾಗಿದೆ. ಜಿಲ್ಲೆಯಲ್ಲಿ 2018 ರಲ್ಲಿ 15, 2019 ರಲ್ಲಿ 44 ಹಾಗೂ 2020 ರಲ್ಲಿ 46 ಪ್ರಕರಣಗಳು ಸೇರಿದಂತೆ ಒಟ್ಟು ಈವರೆಗೆ 105 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ. ಪ್ರಸಕ್ತ ವರ್ಷ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದು, ಈ ಬಗ್ಗೆ ಮಾಹಿತಿ ಇದ್ದವರು ಮಾತ್ರ ದೂರು ನೀಡುತ್ತಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.

ಹೈಟೆಕ್ ಸೈಬರ್ ಲ್ಯಾಬ್:
ಸೈಬರ್ ಅಪರಾಧ ಎಸಗುವವರು ರೈತರು, ಅವಿದ್ಯಾವಂತರು, ಸಣ್ಣಪುಟ್ಟ ವ್ಯಾಪಾರಿಗಳು, ಮಹಿಳೆಯರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ವರ್ಗದವರು ಜಾಗೃತರಾಗಬೇಕು. ಈ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸಬೇಕು. ಸೈಬರ್ ಪ್ರಕರಣ ನಿಯಂತ್ರಿಸುವಲ್ಲಿ ರಾಜ್ಯವು ಬಹಳಷ್ಟು ಮುಂಚೂಣಿಯಲ್ಲಿದೆ. ಇದಕ್ಕಾಗಿ ಸೈಬರ್ ಲ್ಯಾಬ್‍ನ್ನು ಬೆಂಗಳೂರಿನಲ್ಲಿ ತೆರೆಯಲಾಗಿದ್ದು, ದೇಶದಲ್ಲಿನ ಮೊದಲ ಹೈಟೆಕ್ ಸೈಬರ್ ಲ್ಯಾಬ್ ಇದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್, ಈ ಕಾರ್ಯಕ್ರಮವು ಒಂದು ಹೊಸ ಬದಲಾವಣೆ ತರಲು ಅವಕಾಶ ಒದಗಿಸಲಿದೆ. ಜೊತೆಗೆ ಮೋಸ ಹೋಗುವವರನ್ನು ತಡೆಯಲು ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ABOUT THE AUTHOR

...view details