ಕರ್ನಾಟಕ

karnataka

ETV Bharat / state

ಚಿಗಟೇರಿ ಜಿಲ್ಲಾಸ್ಪತ್ರೆ 100 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ: ಸಚಿವ ಭೈರತಿ ಬಸವರಾಜ್ - ಚಿಗಟೇರಿ ಜಿಲ್ಲಾಸ್ಪತ್ರೆ 100 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಸುದ್ದಿ

ದಾವಣಗೆರೆ ಜಿಲ್ಲೆಯ ಚಿಗಟೇರಿ ಜಿಲ್ಲಾಸ್ಪತ್ರೆಯನ್ನು‌ ಮೇಲ್ದರ್ಜೆಗೇರಿಸಲು ಹಣ ಮಂಜೂರು ಮಾಡುವಂತೆ ಸಿಎಂ ಬಳಿ ಮನವಿ ಮಾಡಿದ್ದು, ಬಿಎಸ್​ವೈ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

bairathi-basavraj-reaction-on-chigateri-hospital
ಸಚಿವ ಬೈರತಿ ಬಸವರಾಜ್ ಹೇಳಿಕೆ

By

Published : Jun 12, 2020, 4:14 PM IST

ದಾವಣಗೆರೆ:ಚಿಗಟೇರಿ ಜಿಲ್ಲಾ ಆಸ್ಪತ್ರೆಯನ್ನು‌ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಭೈರತಿ ಬಸವರಾಜ್ ಭರವಸೆ ನೀಡಿದ್ದಾರೆ.

ಆಸ್ಪತ್ರೆಯನ್ನು ಉನ್ನತೀಕರಿಸಲು 100 ಕೋಟಿ ರೂಪಾಯಿ ಬೇಕಾಗುತ್ತದೆ. ಈ ಹಣ ನೀಡುವಂತೆ ಸಿಎಂ ಯಡಿಯೂರಪ್ಪನವರ ಬಳಿ‌ ಕೇಳಿದ್ದೇವೆ.‌ ಶಾಸಕರು, ಸಂಸದರ ಜೊತೆಗೂಡಿ ಮನವಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.‌

ಸಚಿವ ಭೈರತಿ ಬಸವರಾಜ್
ಜಿಲ್ಲಾಸ್ಪತ್ರೆಯಲ್ಲಿ‌ ಕೋವಿಡ್-19 ಪರೀಕ್ಷಾ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆಯನ್ನಾಗಿಸಲು ಶ್ರಮ ವಹಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದ್ರು. ಎಸ್.ಎಸ್. ಹೈಟೆಕ್ ಆಸ್ಪತ್ರೆ, ಜೆಎಂಎಂ ಆಸ್ಪತ್ರೆ ಹಾಗೂ ಈಗ ಜಿಲ್ಲಾಸ್ಪತ್ರೆಯಲ್ಲಿ‌ ಕೊರೊನಾ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆದ ಬಳಿಕ ಹದಿನೈದು ಬಾರಿ ಬಂದಿದ್ದೇನೆ. ದಿನಕ್ಕೆ 200 ಮಂದಿಯ ಗಂಟಲು ದ್ರವದ ಸ್ಯಾಂಪಲ್​​ಗಳನ್ನು ಪರೀಕ್ಷೆ ಮಾಡಬಹುದು. ಮುಂದಿನ ದಿನಗಳಲ್ಲಿ ಈ ಪ್ರಮಾಣ ಹೆಚ್ಚಾಗಲಿದೆ ಎಂದ ಅವರು, ದಾವಣಗೆರೆಗೆ ಮೆಡಿಕಲ್ ಕಾಲೇಜು ಬೇಕು ಎಂಬ ಬೇಡಿಕೆ ಮೊದಲಿನಿಂದಲೂ ಇದೆ. ಬಜೆಟ್​​ನಲ್ಲಿ ಘೋಷಿಸಬೇಕೆಂದು ಸಿಎಂ ಬಳಿ ಮನವಿ ಮಾಡುತ್ತೇನೆ ಎಂದು ಹೇಳಿದ್ರು.

For All Latest Updates

TAGGED:

ABOUT THE AUTHOR

...view details