ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಂಟಿಂಗ್ಸ್ ಹಾಗೂ ಬ್ಯಾನರ್ಗಳಿಗೆ ನಿಷೇಧ ಹೇರಲಾಗಿದೆ. ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಧಾರ್ಮಿಕ ಮುಖಂಡರು ಮತ್ತು ಮುದ್ರಣ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಿಸಿಟಿವಿ, ಸ್ಮಾರ್ಟ್ ಪಾರ್ಕಿಂಗ್, ಸಂಚಾರ ಸಿಗ್ನಲ್‍ಗಳನ್ನು ಅಳವಡಿಸಲಾಗುತ್ತಿದೆ. ಈ ಕಾಮಗಾರಿಗಳು ಸಂಪೂರ್ಣ ಪೂರ್ಣಗೊಳ್ಳುವ ಹಂತದಲ್ಲಿದ್ದು, ನಗರದಲ್ಲಿ ವಿವಿಧ ಸಮುದಾಯದ ಹಬ್ಬಗಳು, ಜನ್ಮ ದಿನಾಚರಣೆ, ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರುಗಳ ಬ್ಯಾನರ್ ಅಳವಡಿಸಬಾರದು ಎಂದು ಎಸ್ಪಿ ಹನುಮಂತರಾಯ ಹೇಳಿದರು.