ದಾವಣಗೆರೆ:ಜಿಗುಪ್ಸೆಗೊಂಡು ಬಿಇ ವಿದ್ಯಾರ್ಥಿವೋರ್ವ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಾಸ್ಪದ ಪ್ರಕರಣ ನಗರದ ಕುಂದುವಾಡ ಕೆರೆ ಬಳಿ ನಡೆದಿದೆ.
ದಾವಣಗೆರೆಯ ಕುಂದುವಾಡ ಕೆರೆಗೆ ಹಾರಿ ಬಿಇ ವಿದ್ಯಾರ್ಥಿ ಆತ್ಮಹತ್ಯೆ ಶಂಕೆ - suicide news
ನಗರದ ಜಿಎಂಐಟಿ ಕಾಲೇಜಿನಲ್ಲಿ ಬಿಇ ವಿದ್ಯಾಭ್ಯಾಸ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ
ಎಸ್.ಎಸ್. ಬಡಾವಣೆ ನಿವಾಸಿ ರಂಜಿತ್ ಭಟ್ (24) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಜಿಎಂಐಟಿ ಕಾಲೇಜಿನಲ್ಲಿ ಬಿಇ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲದೆ ಜಿಗುಪ್ಸೆಗೊಂಡಿದ್ದ ಎಂದು ಹೇಳಲಾಗ್ತಿದೆ. ಈ ಹಿನ್ನೆಲೆಯಲ್ಲಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.