ದಾವಣಗೆರೆ:ನಾನು ಸಿದ್ದರಾಮಯ್ಯ ಬಗ್ಗೆ ಮಾತನಾಡುವುದಿಲ್ಲ, ಕೆಲ ರಾಜಕೀಯ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಿರಾಕರಿಸಿದರು.
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎರಡು ಸಾವಿರ ಫಲಾನುಭವಿಗಳಿಗೆ ಸರ್ಕಾರ ವಿವಿಧ ಕಾರ್ಯಕ್ರಮಗಳ ಹಕ್ಕು ಪತ್ರಗಳನ್ನು ನೀಡಬೇಕಾಗಿದೆ.
ಸಿದ್ದರಾಮಯ್ಯ ಬಗ್ಗೆ ಮಾತನಾಡಲು ನಿರಾಕರಿಸಿದ ಬೈರತಿ ಬಸವರಾಜ್ ಇನ್ನು ಮಹಿಳೆಯರು ಸ್ವಾವಲಂಬಿಯಾಗಿ ಬೆಳೆಯುತ್ತಿರುವುದು ನೋಡಲು ಬಹಳ ಖುಷಿಯಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ವಸ್ತುಗಳ ಪ್ರದರ್ಶನ ಏರ್ಪಡಿಸಿರುವುದು ಕೂಡ ಗಮನಿಸಬಹುದಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬೆಳೆಯಲು ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳನ್ನು ಗುರುತಿಸಿ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ನಮ್ಮ ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್ನಿಂದ 1.50 ಲಕ್ಷಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರು ಅಕ್ರಮ ಸೇರ್ಪಡೆ: ಎನ್ ಆರ್ ರಮೇಶ್