ದಾವಣಗೆರೆ: ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರ ಹೊರ ವಲಯದ ಬೇತೂರು ಗ್ರಾಮದಲ್ಲಿ ನಡೆದಿದೆ.
ಬೈಕ್- ಆಟೋ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು - ದಾವಣಗೆರೆ ಅಪಘಾತ ಸುದ್ದಿ
ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದಾವಣಗೆರೆ ಹೊರ ವಲಯದ ಬೇತೂರು ಗ್ರಾಮದಲ್ಲಿ ನಡೆದಿದೆ.
ಸಂಜೀವ್ (33) ಸಾವನ್ನಪ್ಪಿದ ಮೃತ ವ್ಯಕ್ತಿ. ಈತ ತನ್ನ 16 ವರ್ಷದ ಅಳಿಯನಿಗೆ ಆರೋಗ್ಯ ಸರಿ ಇಲ್ಲದ ಕಾರಣ ಮಂಗಳವಾರ ರಾತ್ರಿ 9.30 ರ ಸುಮಾರಿಗೆ ದಾವಣಗೆರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿಕೊಂಡು ಸ್ವಗ್ರಾಮ ಬೇತೂರಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಆಟೋಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಆಗ ಬೈಕ್ ಸವಾರ ಸಂಜೀವ್ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇನ್ನು, ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತನ್ನ ಮಾವನ ಮೃತದೇಹದ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯ ಮನಕಲುಕುವಂತಿತ್ತು. ಅಪಘಾತವಾದ ಸ್ಥಳದಲ್ಲೇ ಆಟೋವನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು, ದಾವಣಗೆರೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.