ಕರ್ನಾಟಕ

karnataka

ETV Bharat / state

ಟಿಪ್ಪರ್​ಗೆ ಬೈಕ್ ಡಿಕ್ಕಿ : ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅನಗವಾಡಿ ರಸ್ತೆಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾನೆ.

ದಾವಣಗೆರೆಯಲ್ಲಿ ರಸ್ತೆ ಅಪಘಾತ
Raod accident in davanagere

By

Published : Dec 24, 2020, 6:54 AM IST

ದಾವಣಗೆರೆ : ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅನಗವಾಡಿ ರಸ್ತೆಯಲ್ಲಿ ನಡೆದಿದೆ.

ಬೈಕ್​​ ಸವಾರ ವಾಸೀಂ ಅಹ್ಮದ್ (30) ಮೃತ ವ್ಯಕ್ತಿ, ಹಿಂಬದಿ ಸವಾರ ಅಮೀರ್ (45) ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿ

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ನಿಂತಿದ್ದ ಟಿಪ್ಪರ್ ಲಾರಿಗೆ ವೇಗವಾಗಿ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಲಾರಿಗೆ ಹಿಂದೆ ರಿಫ್ಲೆಕ್ಟರ್ ಹಾಕದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಓದಿ: ಕರ್ತವ್ಯಲೋಪ; ಪೊಲೀಸ್ ಇನ್ಸ್​ಪೆಕ್ಟರ್​​ಗೆ ಕಸಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್!

ಘಟನಾ ಸ್ಥಳಕ್ಕೆ ಹೊನ್ನಾಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ABOUT THE AUTHOR

...view details