ಕರ್ನಾಟಕ

karnataka

ETV Bharat / state

ಹರಿಹರ ನಗರ ಮತ್ತು ಗ್ರಾಮೀಣ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ಆಯ್ಕೆ - Harihar President selection News

ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರ ಇಡುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್​ ಹೇಳಿದರು.

ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ

By

Published : Nov 24, 2019, 7:31 PM IST

ಹರಿಹರ : ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರ ಇಡುವ ಕೆಲಸ ಭಾರತೀಯ ಜನತಾ ಪಾರ್ಟಿ ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್​ ಹೇಳಿದರು.

ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ
ಹರಿಹರದ ಹೆಚ್.ಕೆ ವೀರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದಾಗಿ ದಾವಣಗೆರೆಯ ಪಾಲಿಕೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆಯುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದವರು ನಾವು ನಿಷ್ಠಾವಂತ ಕಾರ್ಯಕರ್ತರು ಎಂದು ಹೇಳಿಕೊಳ್ಳುತ್ತಿರುವುದು ನನಗೆ ಆಶ್ಚರ್ಯ ಉಂಟು ಮಾಡುತ್ತಿದೆ. ಜಿಲ್ಲೆಯಲ್ಲಿ ಮುಖಂಡರಿಂದ ಪಕ್ಷ ಬೆಳೆದಿಲ್ಲ ಸಾವಿರಾರು ಕಾರ್ಯಕರ್ತರ ಪರಿಶ್ರಮ ಮತ್ತು ಬಲಿದಾನದಿಂದಾಗಿ ಈ ಮಟ್ಟಕ್ಕೆ ಬೆಳೆದಿದೆ. ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಎನ್ನುವುದು ಒಂದು ಜವಾಬ್ದಾರಿ, ಅಧಿಕಾರವಲ್ಲ, ಆದ್ದರಿಂದ ಅಧ್ಯಕ್ಷರಾದವರು ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರನ್ನೂ ಒಟ್ಟಾಗಿ ಸಂಘಟನೆ ಮಾಡಬೇಕು ಎಂದು ನೂತನ ಅಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಜೀವನ ಮೂರ್ತಿ, ಮಂಡಲ ಉಸ್ತುವಾರಿ ಲಿಂಗರಾಜ್ ಗೌಳಿ, ನಗರ ಚುನಾವಣಾ ಸಹ ಪ್ರಬಾರಿ ಹೆಚ್. ಮಂಜನಾಯ್ಕ್, ತಾ.ಪಂ. ಅಧ್ಯಕ್ಷೆ ಶ್ರೀದೇವಿ, ಶಿವಕುಮಾರ್, ರಾಜು ರೊಖಡೆ, ಗೋವಿನಹಾಳ್ ರಾಜಣ್ಣ ಸೇರಿದಂತೆ ಇತರರು ಇದ್ದರು.

ABOUT THE AUTHOR

...view details