ದಾವಣಗೆರೆ:ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ದ ಎಂದು ಸಂಸದ ಜಿ .ಎಂ . ಸಿದ್ದೇಶ್ವರ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಮದಿಗೆ ಮಾತನಾಡಿದ ಅವರು,ಪ್ರಧಾನಿಮೋದಿಯವರ ನೇತೃತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಜಿಲ್ಲೆಯಲ್ಲಿ ಬಿಜೆಪಿ ಜಯ ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದೇ ನನ್ನ ಕೊನೆ ಚುನಾವಣೆ. ನಂತರ ಚುನಾವಣಾ ನಿವೃತ್ತಿ ಘೋಷಿಸುತ್ತೇನೆ. ನಮಗೆ ಎದುರಾಳಿ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದರು.