ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹರಪನಹಳ್ಳಿಯಲ್ಲಿ ಬಾಲಕನ ಮೇಲೆ ಹರಿದ ಬಸ್... ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - Latest davanagere news In davanagere
ಕೆಎಸ್ಆರ್ಟಿಸಿ ಬಸ್ ಹರಿದು ಬಾಲಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ಅಪಘಾತ ದೃಶ್ಯ...!
ಕೆ.ಎಂ.ಸಿದ್ದೇಶ್ ಮೃತ ಬಾಲಕ ಎನ್ನಲಾಗಿದೆ. ಹರಪನಹಳ್ಳಿ ತಾಲೂಕಿನ ಕೆ.ಕಲ್ಲಳಿ ಗ್ರಾಮದ ನಿವಾಸಿಯಾದ ಈ ಬಾಲಕ ರಸ್ತೆ ದಾಟಲು ಮುಂದಾಗುತ್ತಿದ್ದಂತೆ ಬಸ್ ಚಕ್ರಕ್ಕೆ ಸಿಲುಕಿದ್ದಾನೆ. ಸ್ಥಳೀಯರು ತಕ್ಷಣವೇ ಸಹಾಯಕ್ಕೆ ಹೋದರಾದರೂ ಬಾಲಕ ಉಳಿಯಲಿಲ್ಲ. ಸ್ಥಳದಲ್ಲೇ ಇದ್ದ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.