ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿಯ ಹಲಗಿಲವಾಡ ಸೇರಿದಂತೆ ಸುತ್ತಮುತ್ತಲ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು: ಹೀಗಿತ್ತು ಆ ಕಾರ್ಯಾಚರಣೆ? - ಅರಣ್ಯ ಅಧಿಕಾರಿಗಳು ಬೋನ್ ಗೆ ಸೆರೆ
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯ ಹಲಗಿಲವಾಡ ಸೇರಿದಂತೆ ಸುತ್ತಮುತ್ತಲ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸಿಕ್ಕಿ ಬಿತ್ತು
ತಾಲೂಕಿನ ಹಲಗಿಲವಾಡ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ರೈತರಿಗೆ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗಾಗಿ ಅರಣ್ಯ ಅಧಿಕಾರಿಗಳು ಬೋನ್ ಇಟ್ಟಿದ್ದರು.
ಬೆಳಗಿನ ಜಾವ ಬೋನಿನಲ್ಲಿ ಬಿದ್ದು ಚಿರತೆ ಸೆರೆ ಸಿಕ್ಕಿದೆ. ಇನ್ನೂ ಸೆರೆಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.
Last Updated : Oct 18, 2019, 8:11 PM IST