ದಾವಣಗೆರೆ: ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು, ಪ್ರಾಣಭಯದಿಂದ ಇದ್ದ ಜನ್ರು ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - leopard news
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಈ ಹಿನ್ನೆಲೆ ಇಷ್ಟು ದಿನಗಳ ಕಾಲ ಭಯಭೀತರಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಕಳೆದ 4 ದಿನಗಳಿಂದ ಜನರ ನೆಮ್ಮದಿ ಕೆಡಿಸಿತ್ತು. ಅರಣ್ಯ ಇಲಾಖೆ ಹಾಗು ಸ್ಥಳೀಯರ ಕಾರ್ಯಾಚರಣೆಯಿಂದ ಚಿರತೆಯನ್ನ ಸೆರೆ ಹಿಡಿಯಲಾಗಿದೆ.
ಕಳೆದ 4 ದಿನಗಳಿಂದ ಸ್ಥಳೀಯರಿಗೆ ಪ್ರತ್ಯಕ್ಷವಾಗುತ್ತಿದ್ದ ಚಿರತೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಜಮೀನುಗಳಿಗೆ ತೆರಳುವ ರೈತರು ಭಯಭೀತರಾಗಿದ್ದರು.