ಚನ್ನಗಿರಿ: ಆರೋಗ್ಯ ಕೇಂದ್ರಗಳಿಗೆ ಸಿಇಓ ದಿಢೀರ್ ಭೇಟಿ, ಪರಿಶೀಲನೆ - Channagiri latest news
ನಿನ್ನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಆರೋಗ್ಯ ಕೇಂದ್ರಗಳಿಗೆ ಸಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾವಣಗೆರೆ:ಜಿಲ್ಲೆಯ ಚನ್ನಗಿರಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚನ್ನಗಿರಿ ತಾಲೂಕಿನ ಕರಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆರೆಬಿಳಚಿ ಸಮುದಾಯ ಆರೋಗ್ಯ ಕೇಂದ್ರ, ಚನ್ನಗಿರಿ ತಾಲೂಕು ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಐಎಲ್‍ಐ ಮತ್ತು ಎಸ್ಎಆರ್ಐ ಪ್ರಕರಣಗಳ ಕುರಿತು ತಾಲೂಕು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ಕೊರೊನಾ ಸೋಂಕು ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದ್ದು, ಹೆಚ್ಚಿನ ಜಾಗೃತಿ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಬರುವ ರೋಗಿಗಳಿಗೆ ಮಾಸ್ಕ್ ಧರಿಸಿ ಬರುವಂತೆ ಸೂಚಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕೊರೊನಾ ಲಕ್ಷಣಗಳು ಇರುವವರು ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ ಎಂದು ಸೂಚನೆ ನೀಡಿದರು.