ಕರ್ನಾಟಕ

karnataka

ETV Bharat / state

ಬಿಎಸ್​ವೈ ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ: ಬೊಮ್ಮಾಯಿ - ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ವಾತಾವರಣ ಬಿಜೆಪಿಗೆ ಪೂರಕವಾಗಿದೆ. ಎರಡು ಕ್ಷೇತ್ರಗಳಲ್ಲಿ 2 ದಿನ‌ ಬಿಎಸ್​ವೈ ಪ್ರಚಾರ ಮಾಡಲಿದ್ದಾರೆ. ನಾವು ಒಗ್ಗಟ್ಟಾಗಿ ಚುನಾವಣೆ ಪ್ರಚಾರ ಮಾಡುತ್ತೇವೆ, ಎರಡು ಕ್ಷೇತ್ರಗಳಲ್ಲೂ ಗೆಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ
ಬೊಮ್ಮಾಯಿ

By

Published : Oct 16, 2021, 12:27 PM IST

Updated : Oct 16, 2021, 12:58 PM IST

ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪ ನಾನೇ ಖುದ್ದಾಗಿ ಸಂಪರ್ಕ‌ ಮಾಡಿ ಮಾತನಾಡಿದ್ದು, ಅವರು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ವಾತಾವರಣ ಬಿಜೆಪಿಗೆ ಪೂರಕವಾಗಿದೆ. ಎರಡು ಕ್ಷೇತ್ರಗಳಲ್ಲಿ 2 ದಿನ‌ ಬಿಎಸ್​ವೈ ಪ್ರಚಾರ ಮಾಡಲಿದ್ದಾರೆ. ನಾವು ಒಗ್ಗಟ್ಟಾಗಿ ಚುನಾವಣೆ ಪ್ರಚಾರ ಮಾಡುತ್ತೇವೆ, ಎರಡು ಕ್ಷೇತ್ರಗಳಲ್ಲೂ ಗೆಲುತ್ತೇವೆ ಎಂದು ಸಿಎಂ ಬೊಮ್ಮಾಯಿ ಭವಿಷ್ಯ ನುಡಿದರು.

ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಸಿಎಂ ಬಸವರಾಜ್​ ಬೊಮ್ಮಾಯಿ

ಸಿ.ಎಂ.ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತ:

ಸಿ.ಎಂ ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು. ಅವರಿಗೆ ಯಾವಾಗ ಜ್ಞಾನೋದಯವಾಗಿತ್ತೋ ಗೊತ್ತಿಲ್ಲ ಎಂದು ನವೆಂಬರ್ ತಿಂಗಳಲ್ಲಿ ಬಸವರಾಜ ಬೊಮ್ಮಾಯಿ ಅಧಿಕಾರಿ ಕಳೆದುಕೊಳ್ಳಲಿದ್ದಾರೆ ಎಂಬ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಕೋವಿಡ್ ನಿಯಮ ಸರಳೀಕರಣ :

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದು, ಕೋವಿಡ್ ನಿಯಮ ಸರಳೀಕರಣ ಬಗ್ಗೆ ತಜ್ಞರ ಜೊತೆ ಮಾತನಾಡಬೇಕಿದೆ. ಎರಡು ದಿನದಲ್ಲಿ ತಜ್ಞರ ಜೊತೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

Last Updated : Oct 16, 2021, 12:58 PM IST

ABOUT THE AUTHOR

...view details